October 2024

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೋಟದ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟ‌ರ್ ಮುರಳೀಧರ್ ನಾಯ್ಕ ಸೇರಿದಂತೆ ಪೋಲಿಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್‌ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ಡಿಎನ್‌ಎ ಪರೀಕ್ಷೆ ನಡೆಸಬೇಕಾಗಿದೆ. ಸ್ಥಳೀಯರೇ […]

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಕಾರ್ಮಿಕರ ಸಾವು

ಬೆಂಗಳೂರು : ಇಲ್ಲಿನ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇವರಲ್ಲಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಕಾರ್ಮಿಕರ ಸಾವು Read More »

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರುರವರ ಅಧ್ಯಕ್ಷತೆಯಲ್ಲಿ ಬೆಳ್ಳಾರೆಯ ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ Read More »

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗರ್ಭಿಣಿ ಹೆಂಗಸೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ತಪಾಸಣೆಗೆ ತಾಲೂಕು ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಬಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯನ್ನು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ರಜಿಯಭಾನು ಎಂದು ಗುರುತಿಸಲಾಗಿದೆ.ರಜಿಯಾಭಾನು 7 ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಕೆ ಹುಣಸನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋದಾಗ ವೈದ್ಯರು ತಪಾಸಣೆ ನಡೆಸಿ ಅಲ್ಲಿಂದ ಹೊಸದುರ್ಗ ಸಮುದಾಯ ಆರೋಗ್ಯಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದಾರೆ.ಬಸ್‌ನಲ್ಲೇ ಅವಧಿ ಪೂರ್ವ

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ Read More »

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು

ಹಾವೇರಿ: ಮಗ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಿಂದ ವರದಿಯಾಗಿದೆ.ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು.ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ .ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ.ಇಬ್ಬರ ಸಾವಿನಿಂದ ನೊಂದ ಕುಟುಂಬದಲ್ಲಿ ದು:ಖ ಮಡುಗಟದಟ್ಟಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು Read More »

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ

ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿವರನ್ನು ಅ.20 ರಂದು ನಡೆದ ಕ್ರಿಕೆಟ್ ಪಂದ್ಯಾಟದ ಸಮರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ನಿವೃತ್ತ ದೈಹಿಕ ಶಿಕ್ಷಕ ಎ.ಸಿ ವಸಂತ, ಪ್ರಗತಿಪರ ಕೃಷಿಕರು ತೀರ್ಥರಾಮ ಪರ್ನೋಜಿ ಉಳುವಾರು, ಅಶ್ರಪ್ ಗುಂಡಿ, ಸಿದ್ಧೀಕ್ ಕೊಕ್ಕೊ, ಕೆ.ಎಂ

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರಕಾರಗಳಿಗೆ ಮನವಿ ಮಾಡಲು ಡಾ. ವಿರೇಂದ್ರ ಹೆಗ್ಗಡೆ ಭೇಟಿ ಮಾಡಿದ ಹೋರಟಗಾರರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರಿ ಸುಬ್ರಮಣ್ಯ ವಲಯ ಇದರ ವತಿಯಿಂದ ಇಂದು ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇದರ ವತಿಯಿಂದ ಹರಿಹರದಲ್ಲಿ ನಡೆದ ಪ್ರತಿಭಟನ ಸಭೆಯ ಮನವಿಯನ್ನು ವಿರೇಂದ್ರ ಹೆಗ್ಗಡೆಯವರಿಗೆ ನೀಡಿ ಅವರ ಜೊತೆ ಕಸ್ತೂರಿ ರಂಗನ್ ವರದಿ ಜಾರಿ ಆಗದಂತೆ ಸರಕಾರಗಳಿಗೆ ಮನವಿ ನೀಡುವಂತೆ ವಿನಂತಿಸಲಾಯಿತುಮನವಿ ಸ್ವೀಕರಿಸಿದ ಪೂಜ್ಯರು ಕಸ್ತೂರಿ ರಂಗನ್ ವರದಿ ಜಾರಿಗೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರಕಾರಗಳಿಗೆ ಮನವಿ ಮಾಡಲು ಡಾ. ವಿರೇಂದ್ರ ಹೆಗ್ಗಡೆ ಭೇಟಿ ಮಾಡಿದ ಹೋರಟಗಾರರು Read More »

ಮಹಾಮಳೆಗೆ ಅಣ್ಣ ತಂಗಿ ನಾಪತ್ತೆ

ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಬೆಂಗಳೂರು ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ನಡುವೆ ನಗರದ ಕೆಂಗೇರಿ ಬಳಿ ಅಣ್ಣ, ತಂಗಿ ನಿನ್ನೆಯಿಂದ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಣ್ಣ ಶ್ರೀನಿವಾಸ್ ಶ್ರೀನಿವಾಸನ ತಂಗಿ ನಾಪತ್ತೆಯಾದ ಮಕ್ಕಳು ಮಳೆನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾಪತ್ತೆಯಾಗಿರುವ ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮಹಾಮಳೆಗೆ ಅಣ್ಣ ತಂಗಿ ನಾಪತ್ತೆ Read More »

ಸಿಲಿಂಡರ್ ಸ್ಪೋಟಗೊಂಡು ಐವರು ಸಾವು

ಸಿಕಂದರಾಬಾದ್ : ಸಿಕಂದರಾಬಾದ್ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಸ್ಫೋಟದಿಂದಾಗಿ ಮನೆಯ ಒಂದು ಭಾಗ ಕುಸಿದಿದೆ.ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ರಾತ್ರಿ 8.30 ರಿಂದ 9 ರ ನಡುವೆ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿ ಸುಮಾರು 19 ಜನರು ವಾಸಿಸುತ್ತಿದ್ದರು.ಎಂಟು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತು.ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ” ಎಂದು ಅವರು

ಸಿಲಿಂಡರ್ ಸ್ಪೋಟಗೊಂಡು ಐವರು ಸಾವು Read More »

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ.ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಗಳ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ Read More »

error: Content is protected !!
Scroll to Top