ಮರಬಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಹಿನ್ನಲೆ,ಸಾರ್ವಜನಿಕರಿಂದ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ

ಎಡಮಂಗಲ : ಸ್ಕೂಟಿ ಸವಾರನ ಮೇಲೆ ಪುಳಿಕುಕ್ಕು ಸಮೀಪ ದೂಪದ ಮರ ಬಿದ್ದು ಸವಾರ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಸ್ತೆ ಪಕ್ಕದ ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಗ್ರಹಿಸಿ ನ.2ರ ಶನಿವಾರ ಸಾರ್ವಜನಿಕರು ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದ ಸಾರ್ವಜನಿಕರು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಲು ಅವಕಾಶ ನೀಡಲಿಲ್ಲ. ಅದರಿಂದಾಗಿ ಕಡಬ -ಪಂಜ ರಸ್ತೆಯಲ್ಲಿ ಸುಮಾರು ಎರಡೂವರೆ ತಾಸು ವಾಹನ ಸಂಚಾರ ಸ್ಥಗಿತಗೊಂಡಿತು.
ಪಂಜ ವಲಯ ಅರಣ್ಯಾಧಿಕಾರಿ ಸಂಧ್ಯಾ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಮಾತನಾಡಿ, ವಾರದೊಳಗೆ ಅಪಾಯಕಾರಿ ಮರಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮೃತ ವ್ಯಕ್ತಿಗೆ ಸರಕಾರದಿಂದ ಪರಿಹಾರ ಒದಗಿಸಲು ಪೂರಕ ವರದಿ ನೀಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದೆಗೆದುಕೊಳ್ಳಲಾಯಿತು

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top