ಬೆಳಗಾವಿಯ ತಹಶೀಲ್ದಾರ ಕಚೇರಿಯ ಕೊಠಡಿಯಲ್ಲಿಯೇ ಎಸ್ ಡಿಎ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ.
ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವನ್ನವರ ಎಂಬ ಸಿಬ್ಬಂದಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ತಹಶೀಲ್ದಾರರು ಕುಳಿತುಕೊಳ್ಳುವ ಸ್ಥಳದಲ್ಲಿಯ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ಬೆಳಗ್ಗೆ ಕಚೇರಿಗೆ ಸಿಬ್ಬಂದಿ ಬರುತ್ತಿದ್ದಂತೆ ವಿಚಾರ ಗೊತ್ತಾಗಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.