ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು, ಹೆಚ್‌ಡಿಕೆ ಬೆದರಿಸುವುದಾಗಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಎ1 ಆರೋಪಿಯಾಗಿ ಹೆಚ್. ಡಿ. ಕುಮಾರಸ್ವಾಮಿ, ಎ2 ನಿಖಿಲ್, ಹಾಗೂ ಎ3 ಆರೋಪಿ ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ