ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ ಘಟನೆ ವರದಿಯಾಗಿದೆ.
ಈ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್.
ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು.
ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.