ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

Ad Widget . Ad Widget . Ad Widget . . Ad Widget . . Ad Widget .

. Ad Widget . Ad Widget . Ad Widget

ದ.ಕ. ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಸೇರಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಜಿಲ್ಲಾಡ ಳಿತಕ್ಕೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಸೋಮವಾರ ಅವರು ಮಾತನಾಡಿ ದರು.
ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್‌ ನಡಿ ನೋಂದಣಿಯಾದ ಆಸ್ಪತ್ರೆ ಗಳನ್ನು ಹುಡುಕುವುದು ಕಷ್ಟ ಸಾಧ್ಯ ವಾಗಲಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಸವಲತ್ತುಗಳು ಹಾಗೂ ಆಸ್ಪತ್ರೆ ಗಳ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತಾಗಲು ಪ್ರತ್ಯೇಕ ಆ್ಯಪ್ ಸಿದ್ದಗೊಳಿಸಬೇಕು ಎಂದು ಸಂಸದರು ಸೂಚಿಸಿದರು.
ಎಲ್ಲ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಸೌಲಭ್ಯಗಳ ಕುರಿತು ಆರೋಗ್ಯ ಇಲಾಖೆ, ಆಸ್ಪತ್ರೆ ಮತ್ತು ರೋಗಿಗಳ ನಡುವೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯನ್ನು ನೇಮಿಸ ಬೇಕು. ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲವೂ ಆಯುಷ್ಠಾನ್ ಸೇವೆ ಲಭ್ಯ ವಿರಬೇಕು ಎಂದರು.
ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾತನಾಡಿ, ಯಾವುದೇ ಆಸ್ಪತ್ರೆ ಗಳು ಎಪಿಎಲ್ ಕುಟುಂಬಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಆಯು ಫ್ರಾನ್ ಭಾರತ್ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ. ರವರೆಗೆ ಉಚಿತ ಚಿಕಿತ್ಸೆ ದೊರೆಯ ಲಿದೆ. ಎಪಿಎಲ್ ಕುಟುಂಬದವರಿಗೆ ಒಟ್ಟಾರೆ ಚಿಕಿತ್ಸೆ ವೆಚ್ಚದಲ್ಲಿ ಶೇ.30 ರಿಯಾಯಿತಿ ಪಡೆಯಲು ಅವಕಾಶ ಇದೆ. ಆದರೆ ಕೆಲವು ಆಸ್ಪತ್ರೆಗಳಲ್ಲಿ ಎಪಿಎಲ್ ಕುಟುಂಬ ದವರಿಗೆ ಆಯುಷ್ಮಾನ್ ಭಾರತ್ ಸವಲತ್ತು ನೀಡಲು ನಿರಾಕರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು ಈ ಬಗ್ಗೆ ಕ್ರಮ ಜರುಗಿಸಬೇಕಾಗಬಹುದು ಎಂದರು.
ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ ಹರೀಶ್ ಪೂಂಜಾ, ಉಮಾನಾಥ ಕೋಟ್ಯಾನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಇತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top