ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ಪ್ರಮುಖರನ್ನು ಭೇಟಿಯಾಗಿ ಮಗನನ್ನು ಬೆಂಬಲಿಸಬೇಕೆಂದು ಕೇಳಿಕೊಳ್ಳುತ್ತಿದ್ದಾರೆ.
ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು ಬಂಕಾಪುರ ಪಟ್ಟಣದಲ್ಲಿ ಸಭೆ ನಡೆಸಿದರು.
ಬಂಕಾಪುರದ ಪ್ರಮುಖ ಮುಸ್ಲಿಂ ಮುಖಂಡರ ಮನೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಬೊಮ್ಮಾಯಿ, “ನಾನು ಯಾವಾಗಲೂ ನಿಮ್ಮೊಂದಿಗೆ ನಿಂತಿದ್ದೇನೆ. ನಿಮ್ಮ ವ್ಯಾಪಾರ, ಉದ್ಯಮವನ್ನು ಬೆಳೆಸುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ನೀವು ಬೆಳೆಯಬೇಕು ಎಂದು ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.