ಕಡಬ ತಾಲೂಕಿನ ಅಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ಅಕ್ಕ ಪಕ್ಕದ ಸಂಬಂಧಿ ಮನೆಯವರು ಇಬ್ಬರು ಹೊಡೆದಾಡಿಕೊಂಡು ಓರ್ವ ಕೊಲೆಯಯಾದ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಗೋಳಿತ್ತೊಟ್ಟುವಿನ ಅಲಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ ಕೊಲೆಯಾದವರು. ಅವರ ನೆರೆಮನೆಯವರಾದ ಸಂಬಂಧಿ ಹರೀಶ್ ಕೊಲೆ ಮಾಡಿದ ಆರೋಪಿ.ಇದೀಗ ಹರೀಶ್ ನಾಪತ್ತೆಯಾಗಿದ್ದು ಪೊಲೀಸರು ಆತನ ಮೊಬೈಲ್ ಲೊಕೇಶನ್ ಆಧಾರಿಸಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕೊಲೆಗೆ ಆಸ್ತಿ ವಿವಾದ ಕಾರಣ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.