ಸೌತಡ್ಕದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕ ಹಾಗೂ ಹಿಂದು ಯುವತಿಯನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
ಕೊಪ್ಪಳದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದರು.
ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.