ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಎರಡನೇ ಆರೋಪಿಗೆ ನ್ಯಾಯಾಲಯದ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.
2020 ರ ಅಕ್ಟೋಬರ್ 8ರಂದು ಕಲ್ಲುಗುಂಡಿಯ ಸಂಪತ್ ಎಂಬವರನ್ನು ಸುಳ್ಯದ ಶಾಂತಿನಗರ ಅವರ ಬಾಡಿಗೆ ಮನೆಯ ಸಮೀಪ 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು. ಬಳಿಕ ಪೋಲೀಸರು ಎಲ್ಲ 8 ಮಂದಿ ಆರೋಪಿಗಳನ್ನು ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.ಬಳಿಕ ಆರೋಪಿಗಳು ಜೈಲಿನಲ್ಲಿದ್ದರು.
ಅವರಲ್ಲಿ ಎರಡನೇ ಆರೋಪಿಯಾಗಿರುವ ಬಿಪಿನ್ ಎಂಬವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಉಚ್ಚ ನ್ಯಾಯಾಲಯದ ಆದೇಶದಂತೆ ಪುತ್ತೂರಿನ ಐದನೇ ಹೆಚ್ಚುವರಿ ನ್ಯಾಯಾಲಯವು ಜಾಮೀನು ಮೇಲೆ ಬಿಡುಗಡೆಗೆ ಮಾಡಿದೆ.