ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-11-2024ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು ವಹಿಸಿ ಶಿಬಿರಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ, ಸಮಯ ಪ್ರಜ್ಞೆ ಹಾಗೂ ಸೇವಾ ಮನೋಭಾವ ಅರಿಯಲು ಇಂತಹ ಎನ್ ಎಸ್ ಎಸ್ ಶಿಬಿರ ಅವಶ್ಯಕ ಎಂದು ಶಿಬಿರದ ಪ್ರಾಮುಖ್ಯತೆಯನ್ನು ತಿಳಿಸಿದರು .
ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ವ್ಯವಸ್ಥಾಪನ ಸಮಿತಿ ಶ್ರೀ ಕ್ಷೇತ್ರ ರೆಂಜಾಳದ ನಿಕಟ ಪೂರ್ವ ಅಧ್ಯಕ್ಷರಾದ ರಾಘವ ಕಂಜಿಪಿಲಿ, ವ್ಯವಸ್ಥಾಪನ ಸಮಿತಿ ಶ್ರೀ ಕ್ಷೇತ್ರ ರೆಂಜಾಳದ ನಿಕಟಪೂರ್ವ ಸದಸ್ಯರಾದ ಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ಹಾಗೂ ಅನ್ನಪೂರ್ಣ ಸಮಿತಿ ಶ್ರೀ ಕ್ಷೇತ್ರ ರೆಂಜಾಳ ಅಧ್ಯಕ್ಷರಾದ ಚಿನ್ನಪ್ಪ ಗೌಡ ಬೇರಿಕೆ ಯವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟಣ್ಣ ಗೌಡ ಬಾಣೂರು ಅಧ್ಯಕ್ಷರು ಸೇವಾ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಜಗನ್ಮೋಹನ್ ರೈ ಹೈದಂಗೂರು ಉಪಾಧ್ಯಕ್ಷರು ಸೇವಾ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ನಿಕಟಪೂರ್ವ ಸದಸ್ಯರು ವ್ಯವಸ್ಥಾಪನ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಶ್ರೀ ಸತೀಶ್ ರಾವ್ ದಾಸರಬೈಲು ಕಾರ್ಯದರ್ಶಿ ಸೇವಾ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಚೆನ್ನಕೇಶವ ದೋಳ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ, ಕಾಲೇಜಿನ ಶೈಕ್ಷಣಿಕ ಮುಖ್ಯಸ್ಥರಾದ ಡಾ. ಕವಿತಾ ಬಿ ಎಂ, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ, ಎನ್ ಎಸ್ ಎಸ್ ಘಟಕದ ನಾಯಕರುಗಳಾದ ಕುಮಾರಿ ಚೇತನ ಎಂ ಹಾಗೂ ವಿಶ್ವಾಸ್ ಗೌಡ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget . Ad Widget . Ad Widget . . Ad Widget . . Ad Widget .

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶಿಬಿರದ ತಂಡಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಶಿಭಿರಾರ್ಥಿಯಾದ ಕು. ಕಾವ್ಯ ಇವರು ಪ್ರಾರ್ಥಿಸಿ, ಕು. ವೈಷ್ಣವಿ ಎನ್ ಎಂ ಸ್ವಾಗತಿಸಿ, ಡಾ. ಪ್ರಮೋದ ಪಿ ಎ ವಂದಿಸಿದರು. ಕು. ಅಮೂಲ್ಯ ಸಿ ಹಾಗೂ ಸಂಪತ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top