ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನದ ಅಧ್ಯಕ್ಷರಾದ ಲೀಲಾ ದಾಮೋದರ ರವರನ್ನು ಪರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ರವರು ಸನ್ಮಾನಿಸಿ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶುಭಾಶಯಗಳು ತಿಳಿಸಿದರು. ಸಮ್ಮೇಳಧ್ಯಕ್ಷರು ಸಹಕಾರ ಸಂಘದ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘದ ಬೆಳವಣಿಗೆ ಕೃಷಿಕರ ಪ್ರಮುಖ ಸಮಸ್ಯೆಗಳ ಬಗ್ಗೆ ಸಮಾಲೋಚಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ ಪಿ ಎಂ, ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರದೀಪ ಕೆ ಎಂ, ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಷ್ಚಂದ್ರ ಬಂಗಾರಕೋಡಿ, ಪ್ರವೀಣ್ ಮಜಿಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.