ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಟನೆ ನಡೆಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಹಲವರ ಮೇಲೆ ಪ್ರಕರಣ ದಾಖಲು

ಕಸ್ತೂರಿರಂಗನ್ ವರದಿ ವಿರೋಧಿಸಿ ಶುಕ್ರವಾರ ಮಧ್ಯಾಹ್ನ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ವೇಳೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿ ಗುಂಡ್ಯದಲ್ಲಿ ಅನುಮತಿ ಪಡೆಯದೆ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ನ.15ರಂದು ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ಪ್ರತಿಭಟನಾ ಸಭೆಯಲ್ಲಿದ್ದವರು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರ ನೇತೃತ್ವದಲ್ಲಿ ಪ್ರತಿಭಟನಾ ಸಭೆಯ ಸ್ಥಳದಿಂದ ಸುಮಾರು 1 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಪೇಟೆಗೆ ಬಂದು ಮದ್ಯಾಹ್ನ 2.30 ಗಂಟೆಗೆ ರಸ್ತೆತಡೆಯನ್ನು ಪ್ರಾರಂಭಿಸಿದ್ದು ರಸ್ತೆಯ ಮಧ್ಯದಲ್ಲಿಯೇ ಶಾಸಕರಾದ ಭಾಗೀರಥಿ ಮುರುಳ್ಯ ಗುರುರಾಜ್‌ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ, ಪ್ರತಿಭಟನಾಕಾರರಾದ ಸುಧೀರ್ ಶೆಟ್ಟಿ, ನವೀನ್ ನೆರಿಯಾ, ಸತೀಶ್‌ ಶೆಟ್ಟಿ ಬಲ್ಯ ಉಮೇಶ್ ಸಾಯಿರಾಮ್, ವೆಂಕಟ್ ವಳಲಂಬೆ, ಪ್ರಕಾಶ್ ಗುಂಡ್ಯ ಪ್ರಸಾದ್‌ ನೆಟ್ಟಣ, ಸೈಯದ್ ಮೀರಾನ್ ಸಾಹೇಬ್, ಉಮೇಶ್ ಬಲ್ಯ ನವೀನ್ ರೆಖ್ಯಾ ಯತೀಶ್ ಗುಂಡ್ಯ ಗಣೇಶ್ ಮತ್ತು ಇತರರು ಅಕ್ರಮಕೂಟ ಸೇರಿಕೊಂಡು ಅಕ್ರಮ ರಸ್ತೆ ತಡೆ ಮಾಡಿ ಪ್ರತಿಭಟನೆಯನ್ನು ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡದಂತೆ ಹಾಗೂ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸದಂತೆ ತಿಳಿಸಿದರೂ ಇವರುಗಳು ಕೇಳದೆ ಪ್ರತಿಭಟನೆಯನ್ನು ಮುಂದುವರಿಸಿ ಕಸ್ತೂರಿರಂಗನ್ ವರದಿ ವಿರೋಧಿಸಿ ಮತ್ತು ಕಂದಾಯ ಇಲಾಖೆಯ ಅಧಿಕಾರಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ರೀತಿ ಅಕ್ರಮ ಕೂಟ ಸೇರಿಕೊಂಡು ರಸ್ತೆ ತಡೆಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ 3.30 ಗಂಟೆಯ ತನಕ ರಸ್ತೆ ತಡೆಮಾಡಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತಡೆ ಉಂಟು ಮಾಡಿರುತ್ತಾರೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top