ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.
ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಕೆ ಗೋಕುಲ್ ದಾಸ್ ಸುಳ್ಯ ಪ್ರಸ್ತಾವಿಕವಾಗಿ ಮಾತನಾಡಿದರು.
ಚೋಕ್ಕಾಡಿ ವಿದ್ಯಾಸಂಸ್ಥೆ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಪಿ ಎಸ್ ಗಂಗಾಧರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರ್ ಮತ್ತು ಅಂಗನವಾಡಿ ಪುಟಾಣಿ ವಿದ್ಯಾರ್ಥಿ ಮಾ. ಅಚಿಂತ್ಯ ಶುಭಹಾರೈಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯ ಚೇತನ್ ಕಜೆಗದ್ದೆ, ಜಿಲ್ಲಾ ಕೆಡಿಪಿ ಸದಸ್ಯೆ ಶ್ರೀಮತಿ ಸುಜಯ ಕೃಷ್ಣ, ನಗರಪಂಚಾಯತ್ ನಾಮ ನಿರ್ದೇಶಿತ ಸದಸ್ಯ ರಾಜು ಪಂಡಿತ್, ಅನಿಲ್ ರೈ ಪುಡ್ಕಜೆ, ಮಹೇಶ್ ಬೆಳ್ಳಾರ್ಕರ್, ಕೇಶವ ಮೊರಂಗಲ್ಲು, ಚಂದ್ರನ್ ಕೂಟೆಲು, ಜುಬೆರ್ ಅರಂತೋಡು, ಮಂಜುನಾಥ ಮಡ್ತಿಲ, ಅಂಗನವಾಡಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು. ಟ್ರಸ್ಟ್ ನಿರ್ದೇಶಕ ಭವಾನಿಶಂಕರ್ ಕಲ್ಮಡ್ಕ ವಂದಿಸಿದರು. ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.