ಸುಳ್ಯ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಕಛೇರಿ ಸಭಾಂಗಣದಲ್ಲಿ ನ.18ರಂದು ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ನ್ಯಾಯಕ್ಕಾಗಿ ಕನಕದಾಸರು ತಮ್ಮ ಕೃತಿಗಳಲ್ಲಿ ಆದ್ಯತೆ ನೀಡಿರುವುದು ಅವರ ಕೃತಿಗಳಲ್ಲಿ ನಾವು ಕಾಣಬಹುದಾಗಿದೆ ಎಂದ ಅವರು ಕನಕದಾಸರ ಸಂದೇಶಗಳು ನಮಗೆಲ್ಲ ಮಾರ್ಗದರ್ಶಿ ಎಂದರು.
ಅಂಚೆ ಕಛೇರಿ ನಿವೃತ್ತ ಅಧಿಕ್ಷಕ ವಿದ್ವಾನ್ ಹರಿಹರ ಬಾಯಡಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಸುಳ್ಯ ತಹಶೀಲ್ದಾರ್ ಮಂಜುಳಾ, ಸುಳ್ಯ ಪ್ರಭಾರ ಕ್ಷೇತ್ರ ಶಿಕ್ಷಣಾಽಕಾರಿ ಶೀಥಲ್ ಸೇರಿದಂತೆ ಸುಳ್ಯ ನಗರ ಪಂಚಾಯತ್ ಸದಸ್ಯರು, ಸಾರ್ವಜನಿಕರು, ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುಳ್ಯ ನಗರ ಗ್ರಾಮ ಆಡಳಿತಾಧಿಕಾರಿ ತಿಪ್ಪೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.