ಕಾರ್ಕಳ: ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ ನಡುವೆ ಎಎನ್ ಎಫ್, ನಕ್ಸಲರ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.
ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.
ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ
