ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನ.19ರಂದು ನಿಧನರಾಗಿದ್ದಾರೆ. ಅವರಿಗೆ 42ವರ್ಷ
ಪ್ರಾಯವಾಗಿತ್ತು.ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.ಭುವನೇಂದ್ರ ಅವರು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

























































