ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ

ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ನಕ್ಸಲರ ಚಲನವಲನದ‌ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ, ಈ ವೇಳೆ‌ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆತನಿಗೆ ಶರಣಾಗತಿಗೆ ಸೂಚನೆ ನೀಡಲಾಗಿತ್ತು.ಆದರೆ ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿಗಳ ಮೇಲೆ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ ಎಂದು
ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ರೂಪಾ ಮೌದ್ಗಿಲ್ ಹೇಳಿದ್ದಾರೆ.ಅವರು ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದು, ಮಂಗಳವಾರ ‌ಘಟನಾ ಸ್ಥಳಕ್ಕೆ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ರೂಪಾ ಮೌದ್ಗಿಲ್ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈತನ ವಿರುದ್ಧ 60ಕ್ಕೂ ಅಧಿಕ ಪ್ರಕರಣಗಳಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸಹಿತ ಮೂರು ರಾಜ್ಯಗಳಿಗೆ ಬೇಕಾದ ನಕ್ಸಲ್ ವಿಕ್ರಂ ಗೌಡ.
ನಕ್ಸಲ್ ನಿಗ್ರಹ ಪಡೆ ಪೊಲೀಸ್ ಅಧೀಕ್ಷಕ ಜಿತೇಂದ್ರ ದಯಾಮಾ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
10 ದಿನಗಳ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ.
‌ವಿಕ್ರಮ್ ಗೌಡನಿಗೆ 46 ವರ್ಷ ‌ವಯಸ್ಸಾಗಿದ್ದು,
ಕಬಿನಿ ದಳದ 2ನೇ ತಂಡವನ್ನು ಮುನ್ನಡೆಸುತ್ತಿದ್ದ. ನಾಲ್ಕನೇ ತರಗತಿ ವಿದ್ಯಾಭ್ಯಾಸ ಮಾತ್ರ ಪಡೆದಿದ್ದ ಎಂದು ಮಾಹಿತಿ ನೀಡಿದರು.

Ad Widget . Ad Widget . Ad Widget . . Ad Widget . . Ad Widget .

. Ad Widget . Ad Widget . Ad Widget

Leave a Comment

Your email address will not be published. Required fields are marked *

error: Content is protected !!
Scroll to Top