ಮಕ್ಕಳನ್ನು ಶಾಲೆಗೆ ಬೈಕಲ್ಲಿ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್ ಮೇಲೆ ದಾಳಿ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್‌ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕ್ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.