ಗುತ್ತಿಗಾರು ಸಹಕಾರಿ ಸಂಘ ಸಮಾಜಕ್ಕೆ ಮಾದರಿಯಾದ ಸಹಕಾರಿ ಸಂಘ : ಕಟೀಲ್

ಗುತ್ತಿಗಾರು: ಶತಮಾನವನ್ನು ಕಂಡ ಗುತ್ತಿಗಾರು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘ ಸಮಾಜಕ್ಕೆ ಮಾದರಿಯಾದ ಸಹಕಾರ ಸಂಘ ಎಂದು ಮಾಜಿ ಸಂಸದರಾದ ನಳಿನ್‌ಕುಮಾ‌ರ್ ಕಟೀಲ್ ಹೇಳಿದ್ದಾರೆ.
ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಛೇರಿಯ ಶತ ಸೌಧದ ದೀನ್ ದಯಾಳ್ ರೈತ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ನಡೆದ ಸಹಕಾರಿ ಚಳುವಳಿಯಿಂದ ದೇಶದ ಆರ್ಥಿಕ ಸ್ಥಿತಿಗೆ ಸಹಕಾರಿಯಾಗಿದೆ. ನಮ್ಮ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಗಟ್ಟಿಯಾಗಿ ನೆಲೆಯೂರಿದೆ ಎಂದು ಹೇಳಿದರು.
ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಮಾಜಿ ಸಚಿವ ಎಸ್. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್‌ ರೈ ಬಾಲ್ಗೊಟ್ಟು, ಎಸ್‌.ಎನ್. ಮನ್ಮಥ, ದ.ಕ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕ್ಯಾಂಸ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್‌ ಅಂಬೆಕಲ್ಲು, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಮುಖ್ಯ ಅತಿಥಿಗಳಾಗಿದ್ದರು.
ಸಭೆಯ ಆರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಮೆರವಣಿಗೆ ನಡೆಯಿತು. ಸಂಘದಲ್ಲಿ ಸೇವೆ ಸಲ್ಲಿಸಿದ ಮಾಜಿ ಹಾಗೂ ಹಾಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೆಶಕರುಗಳಾದ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಎ.ವಿ. ತೀರ್ಥರಾಮ, ಮುಳಿಯ ಕೇಶವ ಭಟ್, ಮಂಜುಳಾ ಮುತ್ತಾಜೆ, ರವಿಪ್ರಕಾಶ್ ಬಳ್ಳಕ್ಕ, ಕೃಷ್ಣಯ್ಯ ಮೂಲೆತೋಟ, ನವೀನ್ ಬಾಳುಗೋಡು, ಚಂದ್ರಾವತಿ ಮುಂಡೋಡಿ, ಕಂಞ ಬಳ್ಳಕ್ಕ, ಆನಂದ ಹಲಸಿನಡ್ಕ, ಡಿ.ಸಿ.ಸಿ ಬ್ಯಾಂಕ್ ನ ನ ಪ್ರತಿನಿಧಿ ಮನೋಜ್ ಕುಮಾ‌ರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ ವೇದಿಕೆಯಲ್ಲಿದ್ದರು.
ನಿರ್ದೇಶಕ ಎ.ವಿ ತೀರ್ಥರಾಮ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ ವರದಿ ವಾಚಿಸಿದರು. ಕಿಶೋರ್ ಕುಮಾ‌ರ್ ಪೈಕ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top