ಸುಳ್ಯ ಸಾಹಿತ್ಯ,ಸಾಂಸ್ಕೃತಿಕ, ಕಲೆ,ಪ್ರತ್ರಿಕೋದ್ಯ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಚಾಪು ಮೂಡಿಸಿದ ಕ್ಷೇತ್ರವಾಗಿದೆ ಎಂದು ಹಿರಿಯ ಸಾಹಿತಿ ನರೇಂದ್ರ ರೈ ದೇರ್ಲ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಇಲ್ಲಿಯ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಾಂಗಣದಲ್ಲಿ 27ನೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕೇರಳಿಗರು ಹೆಚ್ಚು ಭಾಷಾಭಿಮಾನ ಅವರಂತೆ ನಾವು ಹೆಚ್ಚು ಭಾಷಾಭಿಮಾನ ಮೂಡಿಸಿಕೊಂಡು ಹೆಚ್ಚು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಹೇಳಿದರು.
ಅರಂತೋಡು ಗ್ರಾಮ ಪಂಚಾಯತ್ ಕಚೇರಿ ಬಳಿಯಿಂದ ಸಾಹಿತ್ಯ ಸಮ್ಮೇಳನ ವೇದಿಕೆ ತನಕ ಕನ್ನಡ ಭುವನೇಶ್ವರಿಯ ಮೆರವಣಿಗೆ ಅದ್ದೂರಿ ಮೆರವಣಿಗೆ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಮೆರವಣಿಗೆಗೆ ಚಾಲನೆಯನ್ನು ನೀಡಲಿದ್ದಾರೆ.
ರಾಷ್ಟ್ರಧ್ವಜಾರೋಹಣವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂಪಿ ಶ್ರೀನಾಥ್ ನೆರವೇರಿಸಿದರು. ಪುಸ್ತಕ ಪ್ರದರ್ಶನದ ಉದ್ಘಾಟನೆಯನ್ನು ಮಾನ್ಯ ತಹಶೀಲ್ದಾರ್ . ಮಂಜುಳಾ ಇವರು ನೆರವೇರಿಸಿದರು.ಶಾಸಕಿ ಭಾಗೀರಥಿ ಮುರುಳ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ಹಿರಿಯ ಸಾಹಿತಿ ಲೀಲಾ ದಾಮೋದರ ಇವರ ಸಮ್ಮೇಳನಾಧ್ಯಕ್ಷತೆ ವಹಿಸಿದ್ದಾರೆ.
ಮೆರವಣಿಗೆಯ ಆಕರ್ಷಣೆಯಾಗಿ ಸಿಂಗಾರಿ ಮೇಳ,ಹುಲಿ ವೇಶ,ಸ್ಕೌಡ್ ಗೈಡ್ಸ್ ಬ್ಯಾಂಟ್ ಇದ್ದವು.