ಬೆಂಗಳೂರು: ವರದಕ್ಷಿಣೆ ಕಿರುಕುಳ ಸಹಿಸದೆ ಗಂಡನ ಮನೆಯಲ್ಲೇ ಗರ್ಬಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ.
ರೂಪ ಮೃತ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದ ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ. ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ವರದಕ್ಷಿಣೆ ಕಿರುಕುಳ ಜಾಸ್ತಿಯಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.