ದ.ಕ ಜಿಲ್ಲೆಯ ಪ್ರಸಿದ್ದ ತೀರ್ಥ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ಇಂದು ತೆಗೆಯಲಾಯಿತು.
ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.