ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಸಮೀಪ ಮರದಿಂದ ಬಿದ್ದು ಗಂಭೀರ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ನ.29 ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಕೃಷ್ಣ ಎಂದು ಗುರುತಿಸಲಾಗಿದ್ದು ಅವರಿಗೆ 55 ವರ್ಷ ಪ್ರಾಯವಾಗಿತ್ತು. ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ತಲುಪುತ್ತಿದ್ದಂತೆ ಸಾವನ್ನಪ್ಪಿದರು.