November 2024

ಬಸ್ ಸಂಚಾರದಲ್ಲಿವಾಗಲೇ ಚಾಲಕ ಹೃದಯಾಘಾತದಿಂದ ಸಾವು

ಬೆಂಗಳೂರು: ಬೆಂಗಳೂರು ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಸಂಚಾರದಲ್ಲಿರುವಾಗಲೇ ಬಸ್ ಚಾಲಕ ಕಿರಣ್ ಕುಮಾರ್ (40 ವರ್ಷ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ವೇಳೆ ಬಸ್‌ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ ಬೆಳಗ್ಗೆ ನೆಲಮಂಗಲ ನಗರದ ಬಿನ್ನ ಮಂಗಲದ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಬಸ್ ಸಂಚಾರದಲ್ಲಿವಾಗಲೇ ಚಾಲಕ ಹೃದಯಾಘಾತದಿಂದ ಸಾವು Read More »

(ಕವನ) ಪ್ರೀತಿಯ ಪುತ್ರ

ಅನುದಿನವೂ ನಾನು ನಿನಗೆವಿಶೇಷವಾಗಿ ಪ್ರಾರ್ಥಿಸುವೆನುನನ್ನ ಭರವಸೆಯನ್ನು ಪುನರುಜ್ಜೀವನಗೊಳಿಸಿದನನ್ನ ಪ್ರೀತಿಯ ಮಗ ನೀನು. ನಿನ್ನ ಕಣ್ಣುಗಳಲ್ಲಿನ ಒಂದುನೋಟವು ನನ್ನ ಆಲೋಚನೆಯಅನುಭವದ ಕನ್ನಡಿ , ಮಾತೃತ್ವವು ನಿನ್ನಿಂದನನಗೊದಗಿದ ಪೂರ್ವಜನುಮದ ಪುಣ್ಯವುಸಹಿಸುವೆನು ನಿನಗಾಗಿಬದುಕಿನ ಎಲ್ಲ ಏಳು ಬೀಳನು ಪ್ರತಿ ದಿನವೂ ನನಗೆ ನಿನ್ನ ಜನ್ಮದಿನ…ನಾನು ನಿನ್ನನ್ನು ಹೆತ್ತ ಪ್ರತಿ ಕ್ಷಣಕ್ಕೂ!ಯಾವುದೇ ಮಿತಿಯಿಲ್ಲದ ಸಂತೋಷದಅನುಭವ ನೀಡಿದವನು ನನ್ನ ಮಗನು . ಆ ವಿಶೇಷ ಪ್ರೀತಿ ನನ್ನಹೃದಯಕ್ಕೆ ಮಾತ್ರ ತಿಳಿದಿದೆವಿಶೇಷವು ನನ್ನ ಮಗನ ಪ್ರೀತಿಯುಅದು ನನ್ನ ಹೃದಯಕ್ಕೆ ಮಾತ್ರ ತಿಳಿದಿದೆ. ✍️ ಪ್ರಿಯಾ ಸುಳ್ಯ

(ಕವನ) ಪ್ರೀತಿಯ ಪುತ್ರ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ.6ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ- ರೆಂಜಾಳದ ಶ್ರೀ. ವಿನಾಯಕ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ನೆರವೇರಿಸಿದರು. ಶಿಬಿರದ ಉದ್ಘಾಟನೆಯನ್ನು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಅವ್ಯವಸ್ಥೆ,ಮಾರ್ದನಿಯಲ್ಲಿ ವರದಿ ಪ್ರಕಟ ಹಿನ್ನಲೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಭಾಗೀರಥಿ ಮುರಳ್ಯ,ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಿದಲ್ಲಿ ಪ್ರತಿಭಟನೆ

ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್ಸು ನಿಲ್ದಾಣ ಅವ್ಯವಸ್ಥೆಯ ಬಗ್ಗೆ ಮಾರ್ದನಿ ನ್ಯೂಸ್ ನಲ್ಲಿ ವರದಿ ಪ್ರಕಟವಾದ ಹಿನ್ನಲೆಯಲ್ಲಿ ಬುಧವಾರ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಬಸ್ಸು ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ಸಮಸ್ಯೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಲ್ಲಿ ನಾನೇ ಬಸ್ಸು ನಿಲ್ದಾಣದಲ್ಲಿ ಕಳಿತುಕೊಂಡು ಪ್ರತಿಭಟನೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿ ಅಧಿಕಾರಿಗಳನ್ನು‌ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.ಮಂಗಳವಾರ ಬಸ್ಸು ನಿಲ್ದಾಣದಲ್ಲಿ ಮಹಿಳೆಯೊಬ್ಬರು ಮುರಿದ ಚೇಯರ್ ನಿಂದ ಬಿದ್ದು ಗಾಯಗೊಂಡಿದ್ದರು. ಈ ವರದಿ ಮಾರ್ದನಿ

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಅವ್ಯವಸ್ಥೆ,ಮಾರ್ದನಿಯಲ್ಲಿ ವರದಿ ಪ್ರಕಟ ಹಿನ್ನಲೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಭಾಗೀರಥಿ ಮುರಳ್ಯ,ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಿದಲ್ಲಿ ಪ್ರತಿಭಟನೆ Read More »

ಕುಕ್ಕೆ ಸುಬ್ರಹ್ಮಣ್ಯ ದೇವಳದಿಂದ ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಡ ಹೆಂಡತಿಯ ದುರ್ಮರಣ,ಮಕ್ಕಳು ಗಂಭೀರ

ನರಗುಂದ : ಭೈರನಹಟ್ಟಿ ಗ್ರಾಮದ ಬಳಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂದುರುಗುತ್ತಿದ್ದಾಗ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು. ಅವರಿಬ್ಬರ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನ ಅವರನ್ನು ತಕ್ಷಣ ನರಗುಂದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮನೆಗೆ ಹಿಂದುರುವಾಗ ಬರುವಾಗ

ಕುಕ್ಕೆ ಸುಬ್ರಹ್ಮಣ್ಯ ದೇವಳದಿಂದ ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಡ ಹೆಂಡತಿಯ ದುರ್ಮರಣ,ಮಕ್ಕಳು ಗಂಭೀರ Read More »

ಮುಡಾ ಹಗರಣ ವಿಚಾರಣೆ ಬಳಿಕ ಸಿದ್ದರಮಾಯ್ಯ ಹೇಳಿದ್ದೇನು ಗೊತ್ತಾ?

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು. ಈ ವೇಳೆ ನಗುಮುಖದಿಂದಲೇ ಕಚೇರಿಯಿಂದ ಹೊರ ಬಂದ ಸಿಎಂ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ. ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್‌ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ತಿಳಿಸಿದರು.

ಮುಡಾ ಹಗರಣ ವಿಚಾರಣೆ ಬಳಿಕ ಸಿದ್ದರಮಾಯ್ಯ ಹೇಳಿದ್ದೇನು ಗೊತ್ತಾ? Read More »

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ಕನ್ನಡಿಗರ ಮೇಲಿದೆ

ಸುಳ್ಯ : ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ನುಡಿದರು. ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘಗಳು‌ ಜಂಟಿಯಾಗಿ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ಸುಳ್ಯದ ಸಂಧ್ಯಾರಶ್ಮಿ ಸಭಾಭವನದಲ್ಲಿ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗಿತ್ತು‌. ಕನ್ನಡ ಭಾಷೆ ರಾಜಾಶ್ರಯ

ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ಕನ್ನಡಿಗರ ಮೇಲಿದೆ Read More »

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ, ಸಮಸ್ಯೆ ಪರಿಹರಿಸಲು ಶಾಸಕರ ಸೂಚನೆ

ಮಂಗಳೂರು:ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾವತಿ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ ಸುಳ್ಯದ ವಿದ್ಯುತ್ ಸಮಸ್ಯೆಯ ಬಗ್ಗೆ ಚರ್ಚಿಸಲಾಯಿತು. ಸುಳ್ಯದ 110 ಕೆವಿ ನೂತನ ಲೈನ್‌ ಕಾಮಗಾರಿ ಸುಳ್ಯಕ್ಕೆ ಕಾವು- ಜಾಲ್ಕೂರು ಮಧ್ಯೆ ವಿದ್ಯುತ್ ಲೈನ್ ಕಾಮಗಾರಿನಡೆಯುತ್ತಿದ್ದು ಅದಷ್ಟು ಬೇಗ ಕಾಮಗಾರಿ ಮುಗಿಸಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕರು ಸಲಹೆ ನೀಡಿದರು. ಸುಳ್ಯಕ್ಕೆ ತುರ್ತು ಸಂದರ್ಭದಲ್ಲಿ ವಿದ್ಯುತ್ ಪೂರೈಸಲು ಬೆಳ್ಳಾರೆ- ಪೈಚಾರು ಮೂಲಕ ಹೊಸ ಕೇಬಲ್ ಲೈನ್‌ನ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಮತ್ತು

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ, ಸಮಸ್ಯೆ ಪರಿಹರಿಸಲು ಶಾಸಕರ ಸೂಚನೆ Read More »

ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

ದ.ಕ. ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಸೇರಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಜಿಲ್ಲಾಡ ಳಿತಕ್ಕೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಸೋಮವಾರ ಅವರು ಮಾತನಾಡಿ ದರು.ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್‌ ನಡಿ ನೋಂದಣಿಯಾದ ಆಸ್ಪತ್ರೆ

ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ Read More »

ಶಿರಾಡಿ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಟ್ಯಾಂಕರ್

ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ.ಕೆಲ ಲಘು ವಾಹನ ಚಾಲಕರು ಘಾಟ್‌ನಲ್ಲಿ ತಿರುವು ಪಡೆದುಕೊಂಡು ಬಿಸಲೆ ಘಾಟ್ ಮೂಲಕ ಸಂಚಾರ ಬೆಳೆಸುವ ಪ್ರಯತ್ನ ನಡೆಸಿದ್ದಾರೆ. ಆದ್ರೆ ಕೆಲವೊಂದು ಕಡೆ ಮುಂದೆ ಹೋಗುವ ಆತುರದಲ್ಲಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಅಲ್ಲೂ ಕೂಡಾ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಯಾಂಟರ್ ಮೇಲತ್ತುವ ಕಾರ್ಯ ನಡೆಯುತ್ತಿರುವ ಪ್ರದೇಶದ ಇಕ್ಕೆಲೆಗಳಲ್ಲೂ ವಾಹನ ದಟ್ಟಣೆ ಇದೆ.

ಶಿರಾಡಿ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಟ್ಯಾಂಕರ್ Read More »

error: Content is protected !!
Scroll to Top