November 2024

ಸಂಪಾಜೆ : ಸಂವಿಧಾನ ದಿನ ಆಚರಣೆ

ಸಂಪಾಜೆ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು‌. ಸಂವಿದಾನವನ್ನು ಅಂಗೀಕರಿಸಿದ 75 ನೇ ವರ್ಷವನ್ನು ಸಂವಿಧಾನದ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಉಪಾಧ್ಯಕ್ಷರಾದ ಎಸ್. ಕೆ ಹನೀಫ್ ಪಂಚಾಯತ ಅಬಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಅಬೂಬಕ್ಕರ್.ಎಂ. ಸಿ. ಗ್ರಂಥಾಲಯ ಮೇಲ್ವಿಚಾರಕಿ ನಸೀಮಾ ಸವೇರಪುರ ಪ್ರೌಡ ಶಾಲೆ ವಿದ್ಯಾರ್ಥಿಗಳು ಶಿಕ್ಷಕರು ಉಪಸ್ಥಿತರಿದ್ದರು. ನಸೀಮಾ […]

ಸಂಪಾಜೆ : ಸಂವಿಧಾನ ದಿನ ಆಚರಣೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವಕ್ಕೆ ಚಾಲನೆ

ದ.ಕ ಜಿಲ್ಲೆಯ ಪ್ರಸಿದ್ದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು (ನ.27) ಕೊಪ್ಪರಿಗೆ ಏರುವುದರೊಂದಿಗೆ ಷಷ್ಠಿ ಮಹೋತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.ಇಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವನಡೆಯಲಿದೆ. ನ.30- ಲಕ್ಷದೀಪೋತ್ಸವ,ಡಿ.01- ಶೇಷವಾಹನೋತ್ಸವ,ಡಿ.02- ಅಶ್ವವಾಹನೋತ್ಸವ, ಡಿ.03- ಮಯೂರ ವಾಹನೋತ್ಸವ, ಡಿ.04- ಶೇಷವಾಹನೋತ್ಸವ,, ಡಿ.05- ಹೂವಿನ ತೇರಿನ ಉತ್ಸವ, ಡಿ.06- ಪಂಚಮಿ ರಥೋತ್ಸವ,, ಡಿ.07- ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ,ಡಿ.08- ರಂದು ಅವಭ್ರತೋತ್ಸವ, ನೌಕಾವಿಹಾರ, ನಡೆದು ಡಿ.12- ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ನಡೆಯಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವಕ್ಕೆ ಚಾಲನೆ Read More »

ತಾಲೂಕು ಕಚೇರಿಯಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವು

ಸುಳ್ಯ ತಾಲೂಕು ಕಚೇರಿಗೆ ವ್ಯದ್ಯಾಪ್ಯವೇತನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಅಡ್ಕಾರಿನ ವ್ಯಕ್ತಿಯೊಬ್ಬರು ಸುಳ್ಯ ತಾಲೂಕು ಕಚೇರಿಯ ಪಡಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಗಿದೆ.ಅಡ್ಕಾರಿನ ರಾಘವ ಆಚಾರ್ಯ (65 ವರ್ಷ) ಎಂಬವರು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಇಂದು ಸುಳ್ಯ ತಾಲೂಕು ಕಚೇರಿಗೆ ಬಂದಿದ್ದರು. ಅರ್ಜಿ ಸ್ವೀಕರಿಸಿದ ಅಲ್ಲಿನ ಸಿಬ್ಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳಿ ಎಂದು ಹೇಳೆದ ಮೇರೆಗೆ ಪಡಶಾಲೆಯ ಆವರಣದಲ್ಲಿ ಅವರು ಕುಳಿತಿದ್ದರು. ಸ್ವಲ್ಪ ಹೊತ್ತಲ್ಲಿ ಒಟಿಪಿ ಬಂದಾಗ ರಾಘವ ಆಚಾರ್ಯರನ್ನು ಸಿಬ್ಬಂದಿ ಕೌಂಟರ್ ಬಳಿಗೆ

ತಾಲೂಕು ಕಚೇರಿಯಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವು Read More »

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತವುಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.ತಮಿಳುನಾಡು, ಪುದುಚೆರಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ Read More »

ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆಗೆ ಚಾಲನೆ

ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದ್ದು ಸಂಪಾಜೆ ಗೇಟ್ ಬಳಿಯಿಂದ ಬುಧವಾರ ಚಾಲನೆ ನೀಡಲಾಯಿತು.ಸುಳ್ಯ ತಹಶೀಲ್ದಾರ್ ಮಂಜುಳಾ ಎಮ್. ರಾಷ್ಟ್ರ ಧ್ವಜಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿ ಶುಭಹಾರೈಸಿದರು.ಪಿ.ಸಿ ಜಯರಾಮ, ಸಂಪಾಜೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಅಶೋಕ್‌ಎಡಮಲೆ, ಭವಾನಿ ಶಂಕರ್ ಕಲ್ಮಡ್ಕ, ಭರತ್ ಕುಕ್ಕುಜಡ್ಕ, ರೈತ ಸಂಘ ಜಿಲ್ಲಾ ಪದಾಧಿಕಾರಿ ದಿವಾಕರ ಪೈ, ಅಶ್ರಫ್, ಕರ್ನಾಟಕ ಸರಕಾರ ಕಟ್ಟಡ

ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆಗೆ ಚಾಲನೆ Read More »

ಅಜ್ಜಾವರ : ಆದರ್ಶ ಮಹಿಳೆಯಾಗು ಕ್ರತಿ ಬಿಡುಗಡೆ

ಅಜ್ಜಾವರದ ಚೈತನ್ಯ ಸೇವಾಶ್ರಮಕ್ಕೆ ಅರಂಬೂರಿನ ವೇದಪಾಠಶಾಲೆಯ ಮುಖ್ಯಸ್ಥರಾದ ದಿನೇಶ್ ಭಾರದ್ವಾಜ ಹಾಗೂ ಅಮೇರಿಕದಲ್ಲಿರುವ ಖ್ಯಾತ ವೈದ್ಯೆ ಅಜ್ಜಾವರದ ಚೈತನ್ಯ ಆಶ್ರಮದ ಅಭಿಮಾನಿ ಡಾ.ಜ್ಯೋತಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಚೈತನ್ಯ ಸೇವಾಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 212 ಕ್ರತಿ ಮಾಲೆ ಆದರ್ಶ ಮಹಿಳೆಯಾಗು ವನ್ನು ಡಾ.ಜ್ಯೋತಿ ಬಿಡುಗಡೆಗೊಳಿಸಿದರು. ಡಾ.ಜ್ಯೋತಿಯವರು ಮಾಡುವ ಧರ್ಮಜಾಗೃತಿ ಕಾರ್ಯವನ್ನು ಮೆಚ್ಚಿದ ಸ್ವಾಮೀಜಿಯವರು ಅವರನ್ನು ಸನ್ಮಾನಿಸಿದರು. ವೇದ ಪಾಠ ಶಾಲೆಯ ಪ್ರಾಚಾರ್ಯರಾದ ವೆಂಕಟೇಶ ಶಾಸ್ತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಜ್ಜಾವರ : ಆದರ್ಶ ಮಹಿಳೆಯಾಗು ಕ್ರತಿ ಬಿಡುಗಡೆ Read More »

ಕಾಡು ಹಂದಿಗೆ ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು,ರಸ್ತೆಯಲ್ಲಿ ಬಿದ್ದಿವೆ ಕಾಡು ಹಂದಿಯ ಹೆಪ್ಪು ಕಟ್ಟಿದ ರಕ್ತ

ಕಾಡು ಹಂದಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ನ.27ರಂದು ಮುಂಜಾನೆ ಸ್ಥಳೀಯರೊಬ್ಬರು ವಾಕಿಂಗ್ ಹೋಗುವ ಸಂದರ್ಭದಲ್ಲಿ ರಸ್ತೆಯಲ್ಲಿ ರಕ್ತದ ಗುರುತು ನೋಡಿ, ರಸ್ತೆ ಬದಿಯ ಚರಂಡಿಯಲ್ಲಿ ನೋಡಿದಾಗ ಹಂದಿ ಸತ್ತು ಬಿದ್ದಿರುವುದನ್ನು ಕಂಡಿದೆ. ಕೂಡಲೇ ಅವರು ಸಂಪಾಜೆ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.

ಕಾಡು ಹಂದಿಗೆ ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು,ರಸ್ತೆಯಲ್ಲಿ ಬಿದ್ದಿವೆ ಕಾಡು ಹಂದಿಯ ಹೆಪ್ಪು ಕಟ್ಟಿದ ರಕ್ತ Read More »

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಶ್ಯಾಮ್ ಭಟ್ ಅವರ ಅತ್ತೆ ನಿಧನ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ದಿ. ಡಾ. ಕೀಲಾರು ಗೋಪಾಲಕೃಷ್ಣಯ್ಯ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ಅವರು ಅಸೌಖ್ಯದಿಂದಾಗಿ ನ.26ರಂದು ಸಂಜೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ರಾಜಾರಾಮ ಕೀಲಾರು, ಪುತ್ರಿ ಸುಮನ, ಅಳಿಯ ಡಾ. ಶ್ಯಾಮ್ ಭಟ್, ಸೊಸೆ ಮಮತ, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಶ್ಯಾಮ್ ಭಟ್ ಅವರ ಅತ್ತೆ ನಿಧನ Read More »

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುನಲ್ಲಿ ಸಂವಿಧಾನ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸಂವಿಧಾನ ದಿನಾಚರಣೆಯ ಮಹತ್ವ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಎಲ್ಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಾಮೂಹಿಕವಾಗಿ ಓದಿದರು.

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುನಲ್ಲಿ ಸಂವಿಧಾನ ದಿನಾಚರಣೆ Read More »

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ ತೆಗೆಯುವ ಕಾರ್ಯಕ್ರಮ

ದ.ಕ ಜಿಲ್ಲೆಯ ಪ್ರಸಿದ್ದ ತೀರ್ಥ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ಇಂದು ತೆಗೆಯಲಾಯಿತು.ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ ತೆಗೆಯುವ ಕಾರ್ಯಕ್ರಮ Read More »

error: Content is protected !!
Scroll to Top