November 2024

ಮನೆಯಿಂದ ನಗ ನಗದು ಕಳವು

ಮನೆಯಿಂದ ಕಳ್ಳರು ಅಪಾರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಕುಡ್ತಮುಗೇರ್ ಸಮೀಪ ಮಂಕುಡೆ ಎಂಬಲ್ಲಿ ನಡೆದಿದೆ.ಕೆಲ ದಿನಗಳ ಹಿಂದೆ ಅಳಕೆಮಜಲಿನಲ್ಲಿ 2 ಮನೆಗಳಿಂದ ಇದೇ ಮಾದರಿಯಲ್ಲಿ ಕಳ್ಳತನ ನಡೆದಿತ್ತು.ಮನೆಯ ಯಜಮಾನ ಗಣೇಶ್ ರೈ ಕೆಲಸಕ್ಕೆ ಹೋಗಿದ್ದು, ಮನೆಯ ಯಜಮಾನಿ ವಿಟ್ಲ ಸಂತೆಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 12 ಗಂಟೆಯಿಂದ ಒಂದೂವರೆ ಗಂಟೆಯ ಒಳಗೆ ಈ ಕೃತ್ಯ ನಡೆದಿದೆ ಎಂದು ಅಂದಾಜಿಸಲಾಗಿದೆ.ಮನೆಯ ಹಿಂದಿನ ಬಾಗಿಲನ್ನು ಮುರಿದು ಕಳ್ಳರು ಒಳ ನುಗ್ಗಿದ್ದಾರೆ.ಸ್ಥಳಕ್ಕೆ ವಿಟ್ಲ […]

ಮನೆಯಿಂದ ನಗ ನಗದು ಕಳವು Read More »

ಕುಕ್ಕೆ ದೇವಳಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕುಟುಂಬ ಭೇಟಿ

ದ.ಕ. ಜಿಲ್ಲೆಯ ಪ್ರಸಿದ್ಧ ತೀರ್ಥ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ಮಂಗಳವಾರ ಭೇಟಿ ನೀಡಿದರು.ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ‌ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಷ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಮತ್ತಿತರರು ಉಪಸ್ಥಿತರಿದ್ದರು.

ಕುಕ್ಕೆ ದೇವಳಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕುಟುಂಬ ಭೇಟಿ Read More »

ಸುಳ್ಯ: ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ

ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಉಕ್ಕಿನಮಹಿಳೆ ದಿl ಇಂದಿರಾ ಗಾಂಧೀಯವರ 107ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ, ಸಹಕಾರಿ ಧುರೀಣ ಪಿ ಸಿ ಜಯರಾಮ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಇಂದಿರಾ ಗಾಂಧೀಜಿಯವರು ಮಾಜಿ ಪ್ರಧಾನಿಯಾಗಿ ದೇಶದ ಅಭಿವೃದ್ಧಿ ಮತ್ತು ಬಡತನ ನಿರ್ಮೂಲನೆಗೆ ಕ್ರಾಂತಿಕಾರಿ ಯೋಜನೆಗಳನ್ನು ತಂದವರು. ಇಂದಿರಾ ಗಾಂಧಿಯವರ ಹೆಸರನ್ನು ಸ್ಮರಣೆ ಮಾಡಬೇಕಿರುವುದು ದೇಶದ ಪ್ರಜೆಗಳಾದ ನಮ್ಮ ಕರ್ತವ್ಯ, ರಾಜ್ಯಸರಕಾರ ಇಂದಿರಾ

ಸುಳ್ಯ: ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣುಬಿಗಿದುಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ.ಇಲ್ಲಿಯ ಉಳುವಾರಿನ ಪುಟ್ಟಣ್ಣ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಅವರಿಗೆ 63 ವರ್ಷ ವಯಸ್ಸಾಗಿತ್ತು.ಮ್ರತರು ಒರ್ವ ಪುತ್ರ,ಒಬ್ಬಳು ಪುತ್ರಿಯನ್ನು ಅಗಲಿದ್ದಾರೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ

ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ನಕ್ಸಲರ ಚಲನವಲನದ‌ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ, ಈ ವೇಳೆ‌ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆತನಿಗೆ ಶರಣಾಗತಿಗೆ ಸೂಚನೆ ನೀಡಲಾಗಿತ್ತು.ಆದರೆ ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿಗಳ ಮೇಲೆ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ ಎಂದುರಾಜ್ಯ ಆಂತರಿಕ

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ Read More »

ಪುತ್ತೂರು ಕಾಲೇಜಿನ ಅಪ್ರಾಪ್ತ.ಪಿ.ಯು.ಸಿ ವಿದ್ಯಾರ್ಥಿನಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ

ಪುತ್ತೂರು ನಗರದ ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡುಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುಲ್ಬರ್ಗಾ ಮೂಲದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದಳು.ವಿದ್ಯಾರ್ಥಿನಿಯನ್ನು ಗುಲ್ಬರ್ಗಾದ ಕಾರ್ತಿಕ್ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ನ.17ರಂದು

ಪುತ್ತೂರು ಕಾಲೇಜಿನ ಅಪ್ರಾಪ್ತ.ಪಿ.ಯು.ಸಿ ವಿದ್ಯಾರ್ಥಿನಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ Read More »

ಯುವತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ ವರ್ಷದ ನಮಿತಾ (23)ಎಂಬ ಯುವತಿ ನ.19ರಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಮೃತರು ತಾಯಿ ಓರ್ವ ಸಹೋದರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಹೆಚ್ಚಿ ಕಾರಣ ನಿಗೂಡವಾಗಿದೆ.

ಯುವತಿ ನೇಣು ಬಿಗಿದು ಆತ್ಮಹತ್ಯೆ Read More »

ಕೋಳಿ ಮೊದಲಾ, ಮೊಟ್ಟೆ ಮೊದಲಾ? ಇಲ್ಲಿದೆ ಉತ್ತರ

ಕೋಳಿ ಮೊದಲಾ? ಮೊಟ್ಟೆ ಮೊದಲಾ?’ ಎಲ್ಲರನ್ನು ಬಹು ವರ್ಷಗಳಿಂದ ಕಾಡುತ್ತಿರುವ ಪ್ರಶ್ನೆಯಾಗಿದೆ‌.ಈ ಪ್ರಶ್ನೆಗೆ ವಿಜ್ಞಾನಿಗಳು ಕೊನೆಗೂ ಒಂದು ಉತ್ತರ ನೀಡಿದ್ದಾರೆ. ಜಿನೆವಾ ವಿಶ್ವವಿದ್ಯಾಲಯದ ವಿಜ್ಞಾ ನಿಗಳು ಹಲವು ವರ್ಷಗಳ ಸಂಶೋಧನೆ ನಡೆಸಿದ್ದು, ಮೊಟ್ಟೆಯೇ ಮೊದಲು ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.ಏಕ ಕೋಶದ ಬೆಳವಣಿಗೆಯನ್ನು ಅಧ್ಯಯನ ಮಾಡುವ ‘ಕ್ರೋಮೋಸ್ಪಿ ಯರಾ ಪೆರ್ಸಿಂಕಿ’ ವಿಧಾನದ ಮೂಲಕ ವಿಜ್ಞಾನಿಗಳು ಇದನ್ನು ಸಾಬೀತು ಪಡಿಸಿದ್ದಾರೆ. ಜೀವಸೃಷ್ಟಿಯಲ್ಲಿ ಮೊದಲಿಗೆ ಒಂದು ಜೀವಕೋಶ ಉತ್ಪತ್ತಿಯಾಗುತ್ತದೆ. ಬಳಿಕ ಅದು ನಿಧಾನವಾಗಿ ಅಂದರೆ ಸಾವಿರಾರು ವರ್ಷಗಳವರೆಗೆ ನಿರಂತರವಾಗಿ ಅಭಿವೃದ್ಧಿ ಸಾಧಿಸುತ್ತಾ

ಕೋಳಿ ಮೊದಲಾ, ಮೊಟ್ಟೆ ಮೊದಲಾ? ಇಲ್ಲಿದೆ ಉತ್ತರ Read More »

ಹಿರಿಯ ಪತ್ರಕರ್ತ ಭುವನೇಂದ್ರ ಪುದುಬೆಟ್ಟು ನಿಧನ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನ.19ರಂದು ನಿಧನರಾಗಿದ್ದಾರೆ. ಅವರಿಗೆ 42ವರ್ಷ ಪ್ರಾಯವಾಗಿತ್ತು.ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.ಭುವನೇಂದ್ರ ಅವರು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

ಹಿರಿಯ ಪತ್ರಕರ್ತ ಭುವನೇಂದ್ರ ಪುದುಬೆಟ್ಟು ನಿಧನ Read More »

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ

ದ ಕ ಸಂಪಾಜೆ ಪ್ರಾಥಮಿ ಕ್ರಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ.ಮುಂದಿನ ಡಿ.23ಕ್ಕೆ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿದೆ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಯಿತು. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಹಕಾರಿ ಅಭಿವೃದ್ಧಿ ರಂಗ’ದ ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ಸೋಮಶೇಖರ ಕೊಯಿಂಗಾಜೆ, ಮಹಮ್ಮದ್ ಕುಂಞ ಗೂನಡ್ಕ ಯಮುನಾ ಬಿ ಎಸ್, ಉಷಾ ರಾಮ್

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ Read More »

error: Content is protected !!
Scroll to Top