November 2024

ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ

ಕಾರ್ಕಳ: ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಗೆ ಬಲಿ Read More »

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ

ಸುಳ್ಯ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಕಛೇರಿ ಸಭಾಂಗಣದಲ್ಲಿ ನ.18ರಂದು ನಡೆಯಿತು.ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ನ್ಯಾಯಕ್ಕಾಗಿ ಕನಕದಾಸರು ತಮ್ಮ ಕೃತಿಗಳಲ್ಲಿ ಆದ್ಯತೆ ನೀಡಿರುವುದು ಅವರ ಕೃತಿಗಳಲ್ಲಿ ನಾವು ಕಾಣಬಹುದಾಗಿದೆ ಎಂದ ಅವರು ಕನಕದಾಸರ ಸಂದೇಶಗಳು ನಮಗೆಲ್ಲ ಮಾರ್ಗದರ್ಶಿ ಎಂದರು.ಅಂಚೆ ಕಛೇರಿ ನಿವೃತ್ತ ಅಧಿಕ್ಷಕ ವಿದ್ವಾನ್ ಹರಿಹರ ಬಾಯಡಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಸುಳ್ಯ

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ Read More »

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಕೆ ಗೋಕುಲ್ ದಾಸ್ ಸುಳ್ಯ ಪ್ರಸ್ತಾವಿಕವಾಗಿ ಮಾತನಾಡಿದರು.ಚೋಕ್ಕಾಡಿ ವಿದ್ಯಾಸಂಸ್ಥೆ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಪಿ ಎಸ್ ಗಂಗಾಧರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರ್ ಮತ್ತು ಅಂಗನವಾಡಿ ಪುಟಾಣಿ ವಿದ್ಯಾರ್ಥಿ ಮಾ. ಅಚಿಂತ್ಯ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ Read More »

ಪೇರಾಲು : ಕ್ರೀಡಾಕೂಟ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಂಡೆಕೋಲು ಗ್ರಾಮ ಗೌಡ ಸಮಿತಿ ಆಶ್ರಯದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಡಿ.1ರಂದು ಮಂಡೆಕೋಲಿನಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕ್ರೀಡಾಕೂಟವು ಪೇರಾಲು ಶಾಲೆಯಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರದ ಅಧ್ಯಕ್ಷತೆಯನ್ನು ಮಂಡೆಕೋಲು ಗ್ರಾಮ ಗೌಡ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ವಹಿಸಿದ್ದರು.ಮ್ಯಾರಥಾನ್ ಓಟಗಾರರಾದ ವಿನಯ್ ನಾರಾಲು ಉದ್ಘಾಟನೆ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಹಿರಿಯ ಕ್ರೀಡಾಪಟು ದೇವದಾಸ್ ಕುಕ್ಕುಡೇಲು, ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾರಾಯಣ ಕೆಲ್ಕಾರ್,

ಪೇರಾಲು : ಕ್ರೀಡಾಕೂಟ ಉದ್ಘಾಟನೆ Read More »

ಶಾಸಕರಿಂದ ಶಾಲಾ ನೂತನ‌ ಕೊಠಡಿಗೆ ಗುದ್ದಲಿ ಪೂಜೆ

ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಕಂದ್ರಪ್ಪಾಡಿ ಇದರ ನೂತನ ಶಾಲಾ ಕೊಠಡಿಯ ಗುದ್ದಲಿ ಪೂಜೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನ.18ರಂದು ನೆರವೇರಿಸಿದರು. ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಂಬೆ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ನಾಯಕರು,ಕಾರ್ಯಕರ್ತರು, ಶಾಲಾಮಕ್ಕಳು ಉಪಸ್ಥಿತರಿದ್ದರು ‌

ಶಾಸಕರಿಂದ ಶಾಲಾ ನೂತನ‌ ಕೊಠಡಿಗೆ ಗುದ್ದಲಿ ಪೂಜೆ Read More »

ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ

ವಿಟ್ಲ: ಸಮಾನಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ: ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮಗೌಡ ಪಾಂಬಾರು ಅವರಿಗೆ ಮನೆನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ.ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ ಸಮಾರಂಭದಲ್ಲಿ

ಒಕ್ಕಲಿಗ ಗೌಡ ಸೇವಾವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ Read More »

ಪರಿವಾರಕಾನದಲ್ಲಿ ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭ : ಭರ್ಜರಿ ವ್ಯಾಪಾರ

ಸುಳ್ಯ: ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೊಟೇಲ್ ಸಮೀಪ ‘ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭಗೊಂಡಿದ್ದು ಭಾರೀ ವ್ಯಾಪಾರ ನಡೆಯುತ್ತಿದೆ. ಸಯ್ಯದ್ ಝನುಲ್ ಅಬಿದಿನ್ ತಂಜಳ್ ಜಯನಗರ ದುವಾ ನೆರವೇರಿಸಿದರು. ಸುಳ್ಯ ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್, ಮೊಗರ್ಪಣೆ ಜುಮಾ ಮಸ್ಟಿದ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಫಿಶ್ ಮಾರ್ಕೇಟ್‌ನ ಮಾಲಕರಾದ ಹಮೀದ್‌, ಶಾಕಿಫ್‌ ಉಪಸ್ಥಿತರಿದ್ದರು.ಮೀನು ಮಾರುಕಟ್ಟೆಯಲ್ಲಿ ಅಂಜಲ್,ಭೂತಾಯಿ,ಬಂಗುಡೆ,ಬೆರ್ಕೆ,ಮದ್ಮಲ್,ಮಾಸಿ,ಸೀಡಿ,ಎಟ್ಟಿ ಸೇರಿದಂತೆ ಉತ್ತಮವಾದ ಎಲ್ಲ ಬಗೆಯ ಮೀನುಗಳು ಅತೀ ಕಡಿಮೆ ದರದಲ್ಲಿ ದೊರೆಯುತ್ತಿದೆ.ಮೀನು ಪ್ರಿಯರಿಗೆ ಇದೊಂದು ಸಿಹಿ ಸುದ್ದಿಯಾಗಿದೆ.ಸುಮಾರು 25

ಪರಿವಾರಕಾನದಲ್ಲಿ ಸೀಫುಡ್ ಸಮುದ್ರ ಫಿಶ್ ಮಾರ್ಕೇಟ್ ಶುಭಾರಂಭ : ಭರ್ಜರಿ ವ್ಯಾಪಾರ Read More »

ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾವೋ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು

ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು Read More »

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪುತ್ತೂರು ತಾಲೂಕಿನ ಕಲ್ಲಾರೆಯ ಕಟ್ಟಡದ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಅವರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರು ಪುತ್ತೂರಿನ ಕಮ್ಯೂನಿಟಿ ಸೆಂಟರ್‌ನ ಸ್ಥಾಪಕ ಹನೀಫ್ ಪುತ್ತೂರು ಅವರ ಪುತ್ರಿ. ಕಲ್ಲಾರೆಯ ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದ ಅವರು ಮೂರು ದಿನಗಳ ಹಿಂದೆ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

ಸಿಡಿಲು ಬಡಿದು ಬಾಲಕ ಸಾವು

ಪುತ್ತೂರು : ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ ಸಾವನ್ನಪ್ಪಿದ ಬಾಲಕ.ಆತನಿಗೆ 13 ವರ್ಷ ಪ್ರಾಯವಾಗಿತ್ತು.ಭಾನುವಾರ ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ.ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಆತನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದರು ತಿಳಿಸಿದರು.ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ

ಸಿಡಿಲು ಬಡಿದು ಬಾಲಕ ಸಾವು Read More »

error: Content is protected !!
Scroll to Top