ಕರ್ನಾಟ ಅರೆಬಾಷೆ ಸಂಸ್ಕ್ರತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿದೆ. ಅರಂಭದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ‘ಫಾರೆಸ್ಟ್ ಬಂಗಲೆ ಬಳಿಯಿಂದ ಆರಂಭಗೊಂಡಿತು. ಮೆರವಣಿಗೆಯನ್ನು ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಚೆಂಡೆ ವಾದ್ಯ ಮೇಳಗಳು, ಕುಣಿತ ಭಜನೆಯೊಂದಿಗೆ ಆಕರ್ಷಕ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿತು.
ಮಂಡೆಕೋಲಿನಲ್ಲಿ ಆಕರ್ಷಕ ಮೆರವಣಿಗೆಯೊಂದಿಗೆ ಅರೆಭಾಷೆ ಗಡಿನಾಡ ಉತ್ಸವಕ್ಕೆ ಚಾಲನೆ
