ಅರೆಭಾಷೆ ನಮ್ಮ ಮನೆಭಾಷೆ.ಅರೆಭಾಷೆಯನ್ನು ನಮ್ಮ ಮಕ್ಕಳಿಗೆ ಕಲಿಸುವ ಮೂಲಕ ಅದನ್ನು ಉಳಿಸಿ ಬೆಳೆಸಬೇಕೆಂದು ಸುಳ್ಯ ಗೌಡರ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷ ಜಾ.ಕೆ ಸದಾನಂದ ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಹಮ್ಮಿಕೊಂಡ ಅರೆಭಾಷೆ ಗಡಿನಾಡ ಉತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿ ಗಡಿಪ್ರದೇಶಗಳಲ್ಲಿ ಅರೆಭಾಷೆಯ ಉಳಿವಿಗಾಗಿ ಮತ್ತು ಅವರ ಬಾಂಧವ್ಯವನ್ನು ವೃದ್ಧಿಸಿ ಅರೆಭಾಷೆ ಬೆಳೆಸುವ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅರೆಭಾಷೆ ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದು ಸುಳ್ಯದ ಗಡಿಭಾಗದಲ್ಲಿ ನಡೆಯುವ ಎರಡನೇ ಕಾರ್ಯಕ್ರಮ ಎಂದು ಹೇಳಿದರು.
ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಮಂಡೆಕೋಲು ಯಾದವ ಚಾರಿಟೇಬರ್ ಟ್ರಸ್ಟಿನ ಅಧ್ಯಕ್ಷ ರಾಮಚಂದ್ರ ಮಾಸ್ಟರ್ ಕೇನಾಜೆ, ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಸುರೇಶ್,ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಜಿ. ಮಾತನಾಡಿದರು.ಮಂಡೆಕೋಲು ಗ್ರಾಮ ಗೌಡ ಸಮಿತಿಯ ಉಸ್ತುವಾರಿ ನಿರ್ದೇಶಕರಾದ ಎಂ.ಎಚ್., ಸುರೇಶ್, ಶಿವಪ್ರಸಾದ್ ಉಗ್ರಾಣಿಮನೆ, ಕುಶಾಲಪ್ಪ ಗೌಡ ಕುಕ್ಕೇಟಿ, ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ಗೋಪಾಲ್ ಪೆರಾಜೆ,ಪಿ.ಎಸ್. ಕಾರ್ಯಪ್ಪ ,ತೇಜಕುಮಾರ್ ಕುಡೆಕಲ್ಲು,ಲತಾ ಪ್ರಸಾದ್,ಸೂದನ ಎಸ್.ಈರಪ್ಪ,ಸಂದೀಪ್ ಪೊಳಕಂಡ,ಮೋಹನ್ ಪೊನ್ಬಚನ,ಕುದುಪಜೆ ಕೆ.ಪ್ರಕಾಶ್,ಅಕಾಡೆಮಿಯ ರಿಜಿಸ್ಸಾರ್ ಚಿನ್ನಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ,ಮತ್ತು ನ್ಯಾಯವಾದಿ ಜಯರಾಜ್ ಕಾರ್ಯಕ್ರಮ ನಿರೂಪಿಸಿದರು.