ದ.ಕ ಜಿಲ್ಲಾ ಕಾಂಗ್ರೆಸ್’ ನಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಜಿಲ್ಲೆಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ಹೇಳಲಾಗುತ್ತಿದೆ.
ಕೆಲವು ದಿನಗಳ ಹಿಂದೆ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ ಗ್ರಾ ಪಂಚಾಯತ್ ಸದಸ್ಯರಿಗೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ನಿಗದಿಪಡಿಸಲಾಗಿತ್ತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ವಿರುದ್ದ ಅಕ್ರೋಶ ವ್ಯಕ್ತವಾಗಿತ್ತು.
ಹೊಡೆದಾಟದ ಸುದ್ದಿ ಹಬ್ಬುತ್ತಿದ್ದಂತೆ ಕಾಂಗ್ರೆಸ್ ಕಛೇರಿಗೆ ಪೊಲೀಸರು ಬೇಟಿ ನೀಡಿದ್ದಾರೆ.
ಸ್ಪೋಟಗೊಂಡ ಭಿನ್ನಮತ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ
