ಬಾಡಿಗೆಗೆಂದು ತೆರಳಿದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾದವರು.ಆತನ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ.ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಟೋ ಚಾಲಕನ ಹುಡುಕಾಟ ನಡೆಸುತ್ತಿದ್ದಾರೆ.