ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾದ ಐವಿ ದ್ರಾವಣ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚಿಗೆ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣ ಹಲವರನ್ನು ಫಾಅ ಬೆಚ್ಚಿ ಬೀಳಿಸಿದೆ. ಸದ್ಯ ಈ ದುರಂತಕ್ಕೆ ಕಾರಣವಾಗಿರಬಹುದು ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ಸಚಿವರು ಆದೇಶ ಮಾಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ ಕಂಪನಿಯ ವಿರುದ್ಧ ಕೇಸ್ ದಾಖಲಿಸುವುದಾಗಿ ತಿಳಿಸಿದ್ದಾರೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top