ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಇವರು ಅಧ್ಯಕ್ಷತೆ ವಹಿಸಿದ್ದ
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯದರ್ಶಿ ಗಳಾದ ಶ್ರೀ. ಕೆ.ವಿ. ಹೇಮನಾಥ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ., ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ. ರತ್ನಾವತಿ ಡಿ., ಭಾಗವಹಿಸಿದ್ದರು. ವೇದಿಕೆಯಲ್ಲಿ ಅರೆಭಾಷೆ ಅಕಾಡೆಮಿಯ ಸದಸ್ಯರು ಹಾಗೆ ಕಾರ್ಯಕ್ರಮದ ಸದಸ್ಯ ಸಂಚಾಲಕರಾದ ಶ್ರೀ. ಚಂದ್ರಶೇಖರ್ ಪೇರಾಲ್, ಅಕಾಡೆಮಿಯ ಸದಸ್ಯರಾದ ಶ್ರೀಮತಿ. ಲತಾ ಪ್ರಸಾದ್ ಕುದ್ಪಾಜೆ, ಶ್ರೀಮತಿ. ಚಂದ್ರಾವತಿ ಬಡ್ಡಡ್ಕ, ಶ್ರೀ. ವಿನೋದ್ ಮೂಡಗದ್ದೆ, ನೆಹರು ಮೆಮೋರಿಯಲ್ ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಂಚಾಲಕರಾದ ಶ್ರೀ. ಸಂಜೀವ ಕುದ್ಪಾಜೆ, ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಅಧ್ಯಕ್ಷರಾದ ಕು. ಹವ್ಯಶ್ರೀ ಕೆ. ಎಸ್. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ. ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ. ಸದಾನಂದ ಮಾವಜಿ ಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ತೃತೀಯ ಬಿಎ ವಿದ್ಯಾರ್ಥಿನಿ ಕು. ಪ್ರಾಪ್ತಿ ಕೆ. ಸಿ., ಪ್ರಾರ್ಥಿಸಿದರು. ಪ್ರೊ. ಸಂಜೀವ ಕುದ್ಪಾಜೆ ಸ್ವಾಗತಿಸಿ, ಶ್ರೀಮತಿ. ಕೃಪಾ ವಂದಿಸಿದರು. ಡಾ. ಅನುರಾಧ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸೋಭಾನೆ, ಅಜ್ಜಿಕಥೆ, ಒಗಟು ಬುಡ್ಸುದು, ಆಶುಕವಿತೆ, ಅರೆಭಾಷೆ ಪೊಳ್ಮೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳ ಸುಮಾರು 90ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದರು ಹಾಗೂ ವಿಜೇತರಿಗೆ ಬಹುಮಾನ ವಿತರಿಸಲಾಯಿತು.