ಸುಳ್ಯ ಆಲೆಟ್ಟಿ ಸಂಪರ್ಕಿಸುವ ರಸ್ತೆಯ ಗುರುಂಪು ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಳಭಾಗದ ಮನೆಯ ಹಿಂಬದಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ವರದಿಯಾಗಿದೆ.
ನಿದ್ರೆ ಮಂಪರಿನಲ್ಲಿದ್ದ ಚಾಲಕ ಎದುರಿನ ತಡೆಗೋಡೆಯೊಂದಕ್ಕೆ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ.ಬಳಿಕ ಹಿಂದಕ್ಕೆ ಸರಿದ ಕಾರು ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಕಾರು ಆಲೆಟ್ಟಿ ರಸ್ತೆಯ ಮೂಲಕ ಕೇರಳದ ಕಣ್ಣೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.