ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್ ಪೀಠ ಆದೇಶಿಸಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ (ಡಿ.13) ಈ ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಗೆಳತಿ ಪವಿತ್ರಾ ಗೌಡ, ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೋಷ್ ಗೆ ಇದೀಗ ಜಾಮೀನು ನೀಡಲಾಗಿದೆ.