ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕಲ್ಟಿರ್ಪೆ ಪೆರಾಜೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ಕೋಲ ನಡೆಯಿತು.
ರಾತ್ರಿ ಸಾನಿಧ್ಯದಲ್ಲಿ ಶ್ರೀ ಗುಳಿಗ ದೈವದ ಕೋಲ ನಡೆದು ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ದೈವದ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು. ನೂರಾರು ಸಂಖ್ಯೆಯಲ್ಲಿ ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಆಗಮಿಸಿದ್ದರು. ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಕಲ್ಚೆರ್ಪೆ : ಗುಳಿಗ ದೈವ ಹಾಗೂ ಪರಿವಾರ ದೈವಗಳ ಕೋಲ
