ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊAಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.
ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು. ಈ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಶ್ರೀ ದೇವರ ಕೊಪ್ಪರಿಗೆ ಅನ್ನದ ಬೋಜನ ಪ್ರಸಾದ ಸ್ವೀಕರಿಸಿದರು.
ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದ ಸುತ್ತಲೂ ನೀರನ್ನು ಮದ್ಯಾಹ್ನದ ನಂತರ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ನಂತರÀ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು.ಬಳಿಕ ವಿವಿಧ ಸಂಗೀತ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆಯಿತು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಈ ಉತ್ಸವವು ಬೇರೆ ಯಾವುದೇ ದೇವಳದಲ್ಲಿ ಕಾಣಸಿಗುವುದಿಲ್ಲ. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು. ಈ ವಿಶಿಷ್ಠ ಉತ್ಸವವನ್ನು ಸಹಸ್ರಾರು ಭಕ್ತರು ವೀಕ್ಷಿಸಿ ಕೃತಾರ್ಥರಾದರು.
ಪುಟಾಣಿಗಳೊಂದಿಗೆ ನೀರಾಡಿದ ಯಶಸ್ವಿ:
ಶ್ರೀ ದೇವಳದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿAದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದ ಪುಟಾಣಿ ಮಕ್ಕಳ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿAದ ನೀರು ಎರಚಿ, ಮಕ್ಕಳೊಂದಿಗೆ ನೀರಾಟವಾಡಿ, ತಾನು ಸಂಭ್ರಮ ಪಡುವುದರೊಂದಿಗೆ, ಭಕ್ತಾಧಿಗಳಿಗೂ ಹೆಚ್ಚಿನ ಸಂತಸವನ್ನು ನೀಡಿತು.ಅಲ್ಲದೆ ನೀರಿನಲ್ಲಿ ಪುಟಾಣಿ ಮಕ್ಕಳು ಒದ್ದೆಯಾಗಿ ಆಟವಾಡುತ್ತಿದ್ದರು.
.