ಪತ್ರಿಕಾ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ, ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ
ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಹಾಗೂ ಸುಳ್ಯ ಕಾರ್ಯನಿತರ ಪತ್ರಕರ್ತರ ಸಂಘ ಖಂಡಿಸಿದೆ.ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಕಾರ್ಯ ನಿಮಿತ ಹೋಗಿದ್ದರು. ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್.ಎನ್.ಎಲ್ ಸಿಮ್ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ ಯಾರೋ ವ್ಯಕ್ತಿಗಳು ಬಿಎಸ್‌ಎನ್‌ಎಲ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರು ನೀಡಿರುವುದು ಮಿಥುನ್ ಆಗಿರಬಹುದೆಂದು ಸಂಸ್ಥೆಯ ವಿಕಾಸ್‌ರವರು […]