ತೆಂಗಿನ ಕಾಯಿ ಧಾರಣೆಯಲ್ಲಿ ಈಗ ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಿದೆ.ಇದರಿಂದ ತೆಂಗು ಬೆಳಗಾರರು ನಿಟ್ಟುಸಿರು ಬಿಟ್ಟಿದ್ದಾರೆ.ಕೇಂದ್ರ ಸರ್ಕಾರ ತೆಂಗು ಬೆಳೆಗಾರರಿಗೆ ದೊಡ್ಡ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಕೊಬ್ಬರಿಯ ಕನಿಷ್ಠ ಬೆಲೆಯನ್ನು ಹೆಚ್ಚಿಸಲು ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಸಭೆಯ ಬಳಿಕ ಈ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ ಗೆ 100 ರೂಪಾಯಿ ಹಾಗೂ ಹೋಳಾದ ಕೊಬ್ಬರಿಗೆ 422 ರೂಪಾಯಿ ಹೆಚ್ಚಿಸಲಾಗಿದೆ. ಕೊಬ್ಬರಿಗೆ ಬೆಂಬಲ ಬೆಲೆ ಸಿಕ್ಕರೆ ರೈತರ ಕಷ್ಟಗಳು ಕಡಿಮೆಯಾಗುತ್ತದೆ