ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದರೆ ಮತ್ತೆ ಅದೇ ತರಗತಿಯಲ್ಲಿ ಓದಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ 2010ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ವಿದ್ಯಾರ್ಥಿಗಳು ಫೇಲ್ ಆದ 2 ತಿಂಗಳಲ್ಲಿ ರೀ ಎಕ್ಸಾಮ್ ಮಾಡಲಾಗುತ್ತದೆ. ಮತ್ತೊಮ್ಮೆ ಪರೀಕ್ಷೆ ಬರೆದು ಪಾಸ್ ಮಾಡಬಹುದು. ಇಲ್ಲದೆ ಹೋದಲ್ಲಿ ಅದೇ ತರಗತಿಯಲ್ಲೇ ಮುಂದುವರಿಯಬೇಕು ಎಂದು ಶಿಕ್ಷಣ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ