ಸಿ.ಟಿ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸಂವಿಧಾನಿಕ ಸಂಘರ್ಷ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಒಳಗೆ ನಡೆಯುವ ವಿಚಾರಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ಮಹಜರು ನಡೆಸಲು ನಾನು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಸದನದ ಒಳಗೆ ಬರಬಾರದು ಎಂದು ಎಚ್ಚರಿಕೆ ನೀಡಿದ್ದೇನೆ. ನನ್ನ ಆದೇಶವನ್ನು ಧಿಕ್ಕರಿಸಿದರೆ ಪೊಲೀಸರೇ ಜೈಲಿಗೆ ಹೋಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಇಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.