ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಓರ್ವ ಅಧಿಕಾರಿಯ ತಲೆದಂಡವಾಗಿದೆ.
ಖಾನಾಪುರದ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್ ಕುಮಾರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ನಾಯಕರನ್ನು ಖಾನಾಪುರ ಠಾಣೆಯೊಳಗೆ ಬಿಟ್ಟು, ಬಿಜೆಪಿ ನಾಯಕರು ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಈ ಅಮಾನತು ನಡೆದಿದೆ.