ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯದ ಅಮರ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ ಅಂಗವಾಗಿ ಸುಳ್ಯದಲ್ಲಿ ಬುಧವಾರ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ನಡೆಯಿತು.
ಸುಳ್ಯದ ಕಾನೂನು ಕಾಲೇಜಿನಲ್ಲಿ ಸ್ಪರ್ಧಾ ಕಾರ್ಯಕ್ರನಕ್ಕೆ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ. ಡಾ.ಎನ್.ಎ.ಜ್ಞಾನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತು ಇತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಕ್ರೀಡಾಪಟು ಸುಬ್ರಹ್ಮಣ್ಯ ಕಾಣಿಯೂರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ
ಕೋಶಾಧಿಕಾರಿ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಪ್ರಧಾನ ಕಾರ್ಯದರ್ಶಿ ಕೆ. ರಾಜು ಪಂಡಿತ್, ಕೋಶಾಧಿಕಾರಿ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಷಾ ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಎ.ಸಿ.ವಸಂತ ವಂದಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು