ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್‌ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.

Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top