ಸರ್ಕಾರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮದುವೆ ಸಹಾಯಧನವೂ ಒಂದಿದೆ. ಹೌದು, ಈ ಯೋಜನೆಯಡಿ ನೋಂದಾಯಿತ ಕಾರ್ಮಿಕರ ಮೊದಲ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ₹ 60 ಸಾವಿರದವರೆಗೆ ಸಹಾಯಧನ ನೀಡುತ್ತದೆ. ಫಲಾನುಭವಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.