ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲೂ ಕಾಂಗ್ರೆಸ್ ನೇತೃತ್ವದ ಸರಕಾರವೂ ಏಳು ದಿನಗಳ ಶೋಕಾಚರಣೆ ಘೋಷಿಸಿದ್ದು, ಶುಕ್ರವಾರ (ಡಿ. 27) ಸರ್ಕಾರಿ ರಜೆ ಘೋಷಿಸಿದ್ದು, ಶಾಲೆ, ಕಾಲೇಜುಗಳು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ,ಶಾಲಾ ಕಾಲೇಜು ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ





































































