ಸುಳ್ಯ : ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಆಡಳಿತ ಮಂಡಳಿಯ ಎಲ್ಲಾ 12 ನಿರ್ದೇಶಕ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಸಂತೋಷ್ ಕುತ್ತಮೊಟ್ಟೆ, ದಯಾನಂದ ಕುರುಂಜಿ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾರ್ ಉಳುವಾರು, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ಚಂದ್ರಶೇಖರ ಎ.ಎಸ್, ಡಾ.ಲಕ್ಷ್ಮೀಶ ಕಲ್ಲುಮುಟ್ಲು, ದಿನೇಶ್ ಅರಮನೆಗಯ, ಹಾಗೂ ಪ್ರಶಾಂತ ಕಾಪಿಲ ಗೆಲುವು ಸಾಧಿಸಿದ್ದಾರೆ.