ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜನ ಸ್ನೇಹಿ ವೈದ್ಯ ಡಾ. ಲಕ್ಷ್ಮೀಶ ಅವರು 702 ಮತಗಳನ್ನು ಪಡೆದು ತನ್ನ ಪ್ರತಿ ಸ್ಪರ್ಧಿ ತೀರ್ಥರಾಮ ಪರ್ನೋಜಿ ಅವರ ವಿರುದ್ದ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ.
ಪ್ರತಿ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ತೀರ್ಥರಾಮ ಪರ್ನೋಜಿ ಅವರು 164 ಮತ ಪಡೆದು ಪರಾಭವಗೊಂಡಿದ್ದಾರೆ.