ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.